ದಾವಣಗೆರೆ : ನ್ಯಾಮತಿ ಎಸ್ ಬಿಐ ಬ್ಯಾಂಕ್ ನಲ್ಲಿ 13 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉತ್ತರ ಪ್ರದೇಶದ 8 ಮಂದಿ ದರೋಡೆಕೋರರ ಮೇಲೆ ನ್ಯಾಮತಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಹೌದು, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಘಟ್ಟ ಕ್ರಾಸ್ ಬಳಿ ತಡರಾತ್ರಿ ಎರಡು ಕಾರುಗಳಲ್ಲಿ ಪ್ರಯಾಣಿಸುತ್ತಿದ್ದ 8 ದರೋಡೆಕೋರರ ಗ್ಯಾಂಗ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶ ಮೂಲದ 8 ಮಂದಿ ದರೋಡೆಕೋರರು ಎರಡು ಕಾರುಗಳಲ್ಲಿ ಸವಳಂಗ ಸೇರಿ ಕೆಲ ಕಡೆ ಬ್ಯಾಂಕ್ ದರೋಡೆಗೆ ಬಂದಿರುವ ಶಂಕೆ ಹಿನ್ನೆಲೆಯಲ್ಲಿ ಕಾರುಗಳ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅವರು ತಪ್ಪಿಸಿಕೊಂಡು ಹೋಗುತ್ತಿದ್ದ ಹಿನ್ನೆಲೆ ನ್ಯಾಮತಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಪರಾರಿಯಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.