ಬೆಂಗಳೂರು : ಇತ್ತೀಚಿಗೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತಲೆ ಇವೆ. ಇದೀಗ ಬೆಂಗಳೂರಿನಲ್ಲಿ 13 ವರ್ಷದ ಬಾಲಕಿಯ ಮೇಲೆ 40 ವರ್ಷದ ವ್ಯಕ್ತಿ ಒಬ್ಬ ಅತ್ಯಾಚಾರ ಎಸಗಿದ್ದು, ಇಡೀ ಬೆಂಗಳೂರಿನ ಜನತೆ ಬೆಚ್ಚಿಬಿದ್ದಿದೆ.
ಹೌದು ಬೆಂಗಳೂರಿನಲ್ಲಿ 13 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘೋರ ಘಟನೆ ನಡೆದಿದೆ. ಸ್ಕ್ರಾಪ್ ಅಂಗಡಿ ಇಟ್ಟುಕೊಂಡಿದ್ದ 40 ವರ್ಷದ ವ್ಯಕ್ತಿಯಿಂದ ಈ ಒಂದು ದುಷ್ಕೃತ್ಯ ನಡೆದಿದೆ. ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಆರೋಪಿ ಪರಿಚಯ ಮಾಡಿಕೊಂಡಿದ್ದ ಎನ್ನಲಾಗಿದೆ.
ಬಾಲಕಿಗೆ ಚಾಕೊಲೇಟ್ ಹಾಗೂ ಐಸ್ ಕ್ರೀಮ್ ಕೊಡಿಸಿ ಆರೋಪಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ನಿನ್ನೆ ಗೋದಾಮಿಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಎಸಿಗಿದ್ದಾನೆ.ಈ ವಿಚಾರ ಗೊತ್ತಾಗಿ ಬಾಲಕಿಯ ಕುಟುಂಬಸ್ಥರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.








