ಬೆಳಗಾವಿ : ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನೇ ಗಾಂಜಾ ಘಮಲೇರಿಸಿಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳ ವೈದ್ಯರಾಗಿರುವ ಡಾ.ರಾಹುಲ್ ವಿಠಲ ಬಂಟಿ ಅವರ ಮನೆಯಲ್ಲಿ ಗಾಂಜಾ ದೊರೆತಿದೆ.
ಈ ಕುರಿತು ಖಚಿತ ಮಾಹಿತಿ ಮೇರೆಗೆ ಮಾಳಮಾರುತಿ ಠಾಣೆ ಪೊಲೀಸರು ಡಾ.ರಾಹುಲ್ ಬಂಟಿ ಅವರ ಶಿವಬಸವ ನಗರದ ಮನೆ ಮೇಲೆ ದಾಳಿ ಮಾಡಿದಾಗ 134 ಗ್ರಾಂ ಗಾಂಜಾ ಸಿಕ್ಕಿದೆ. ಅಷ್ಟೇ ಅಲ್ಲದೇ, ವೈದ್ಯ ಗಾಂಜಾ ಸೇವಿಸಿರುವ ವಿಚಾರವೂ ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ. ಗಾಂಜಾ ಜಪ್ತಿ ಮಾಡಿಕೊಂಡಿರುವ ಮಾಳಮಾರುತಿ ಪೊಲೀಸರು ಡಾ.ರಾಹುಲ್ ಬಂಟಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ನೋಟಿಸ್ ನೀಡಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.








