ಹಾಸನ : ಗುಡಿಸಲಲ್ಲಿ ಮಲಗಿದ್ದ 14 ತಿಂಗಳ ಮಗುವನ್ನು ದುಷ್ಕರ್ಮಿಗಳು ಕದ್ದೊಯ್ದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ.
ಮಳಲಿ ಗ್ರಾಮದಲ್ಲಿ ಇಟ್ಟಿಗೆ ತಯಾರಿಕೆ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ದಂಪತಿಯ ಮಗುವನ್ನು ದುಷ್ಕರ್ಮಿಗಳು ಕಳ್ಳತನ ಮಾಡಿದ್ದಾರೆ. ಸಂಜು, ರೋಹಿತ್ ದಂಪತಿ ಪುತ್ರಿ ಮಗು ಕಳ್ಳತನವಾಗಿದ್ದು, ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.