ತುಮಕೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, 14 ವರ್ಷದ ಮಗಳ ಮೇಲೆಯೇ ತಂದೆಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. 8 ತಿಂಗಳ ಹಿಂದೆ ತುಮಕೂರಿಗೆ ಬಂದಿದ್ದ ಬಾಲಕಿ ಕುಟುಂಬ. ಕೂಲಿ ಕೆಲಸ ಕೆಲಸ ಮಾಡುತ್ತಿದ್ದ ತಂದೆಯೇ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಬಾಲಕಿ ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಬಳಿಕ ವಿಚಾರಣೆ ನಡೆಸಿದ ಪೊಲೀಸರಿಗೆ ತಂದೆಯೇ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದು ತಿಳಿದು ಬಂದಿದೆ. ಸದ್ಯ ಆರೋಪಿ ತಂದೆ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.