ಬಿಹಾರ್ : ಕೊಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ, ಕೊಲೆ ನಡೆದಿರುವ ಘಟನೆ ಮಾಸುವ ಮುನ್ನವೇ ಬಿಹಾರದಲ್ಲಿ ಇಡೀ ದೇಶವೇ ಬೆಚ್ಚಿ ಬೆಳಿಸುವಂತಹ ಮತ್ತೊಂದು ಘಟನೆ ನಡೆದಿದೆ.14 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಸ್ತನಗಳು ಮತ್ತು ಗುಪ್ತಾಂಗವನ್ನು ಕತ್ತರಿಸಿ ಕೊಲೆ ಮಾಡಿದ್ದಾರೆ.
ಹೌದು ಬಿಹಾರದ ಮುಜಾಫರ್‌ಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಾಳಿಕೋರರು ಆ ಬಾಲಕಿಯ ಸ್ತನಗಳನ್ನು ಕತ್ತರಿಸಿ ಆಕೆಯ ಖಾಸಗಿ ಅಂಗಗಳಿಗೆ ಚಾಕುವಿನಿಂದ ಹಲ್ಲೆ ನಡೆಸಿ ಕತ್ತರಿಸಿದ್ದಾರೆ. ಆಕೆಯ ಅರೆಬೆತ್ತಲೆ ಮೃತದೇಹವು ಸೋಮವಾರ ಕೊಳದಲ್ಲಿ ಪತ್ತೆಯಾಗಿದ್ದು, ಆಕೆಯ ಬಾಯಿಗೆ ಬಟ್ಟೆಯನ್ನು ಕಟ್ಟಲಾಗಿತ್ತು ಎಂದು ತಿಳಿದುಬಂದಿದೆ.
ಸಂತ್ರಸ್ತೆಯ ಪೋಷಕರು ಅದೇ ಗ್ರಾಮದ 41 ವರ್ಷದ ಸಂಜಯ್ ರೈ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪೋಲೀಸರ ಪ್ರಕಾರ, 14 ವರ್ಷದ ಬಾಲಕಿ ಹಾಗೂ ಆಕೆಯ ಪೋಷಕರು ದಿನಗೂಲಿಯನ್ನು ಮಾಡುತ್ತಿದ್ದು, ಮಂಗಳವಾರ ಬೆಳಿಗ್ಗೆ ಗ್ರಾಮದ ಕೊಳದೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸಂಜಯ್ ರೈ ಈ ಹಿಂದೆ ಆ ಬಾಲಕಿಗೆ ತನ್ನನ್ನು ಮದುವೆಯಾಗಲು ಒಪ್ಪದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ಪೋಷಕರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.