ಹೈದರಾಬಾದ್: ಹೈದರಾಬಾದ್ನ ಚಾರ್ಮಿನಾರ್ ಬಳಿಯ ಕಟ್ಟಡವೊಂದರಲ್ಲಿ ಇಂದು ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 17 ಜನರು ಸಾವನ್ನಪ್ಪಿದ್ದು, ಸದ್ಯ ಅಗ್ನಿ ಅವಘಡದ ವಿಡಿಯೋ ವೈರಲ್ ಆಗಿದೆ.
ಪ್ರಧಾನಿ ಮೋದಿ ಸಂತಾಪ ಸೂಚಿಸಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು” ಎಂದು PMO ಟ್ವೀಟ್ ಮಾಡಿದೆ.
ಬೆಳಿಗ್ಗೆ 6.30ರ ಸುಮಾರಿಗೆ ಕರೆ ಬಂದಿದ್ದು, ಸ್ಥಳಕ್ಕೆ ಧಾವಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ, “ಇಂತಹ ಘಟನೆಗಳು ತುಂಬಾ ದುಃಖಕರವಾಗಿವೆ. ನಾನು ಕೇಂದ್ರ ಸರ್ಕಾರ ಮತ್ತು ಪ್ರಧಾನಿಯೊಂದಿಗೆ ಮಾತನಾಡುತ್ತೇನೆ ಮತ್ತು ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆರ್ಥಿಕ ನೆರವು ಪಡೆಯಲು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದರು.
ಘಟನೆಯ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಪರಿಹಾರ ಪ್ರಯತ್ನಗಳನ್ನು ಹೆಚ್ಚಿಸಲು ಮತ್ತು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Massive Fire in #Hyderabad's #GulzarHouz Area Claims 8 Lives, Rescue Operations Underway
A major fire tragedy struck Hyderabad this morning as a massive blaze broke out in a building on Gulzar House Road, near the historic Charminar. At least 8 people have lost their lives,… pic.twitter.com/GsiB6uxqBZ
— BNN Channel (@Bavazir_network) May 18, 2025