ನವದೆಹಲಿ: ಉತ್ತರ ಪ್ರದೇಶದ ಉನ್ನಾವೊದ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಬುಧವಾರ ಬೆಳಿಗ್ಗೆ ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ ಹಾಲಿನ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ.
ಗಾಯಗೊಂಡ ಜನರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.