ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗುಂತ ಕೊಲಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಗುಂತ ಕೊಲಮ್ಮನಹಳ್ಳಿ ಗ್ರಾಮದ ನಿವಾಸಿ ಪಾಲಯ್ಯ ಜಿ (58) ಎಂಬಾತ ಬಂಧಿತ ಆರೋಪಿ. ಈತ ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಜಮೀನಿನ ಮೇಲೆ ದಾಳಿ ನಡೆಸಿದ್ದಾರೆ.
ಗಾಂಜಾ ಗಿಡಗಳು: ಒಟ್ಟು 791 ಗಿಡಗಳು.
ತೂಕ: ಅಂದಾಜು 187 ಕೆಜಿ ಗಾಂಜಾ ಸೊಪ್ಪು.
ಮೌಲ್ಯ: ವಶಪಡಿಸಿಕೊಂಡ ಗಾಂಜಾದ ಮಾರುಕಟ್ಟೆ ಮೌಲ್ಯ ಸುಮಾರು 18 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ತಂಡ:
ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರಂಜಿತ್ ಕುಮಾರ್ ಭಂಡಾರು ಹಾಗೂ ಚಳ್ಳಕೆರೆ ಉಪ ವಿಭಾಗದ ಡಿವೈಎಸ್ಪಿ ಸತ್ಯನಾರಾಯಣ ರಾವ್ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ದಾಳಿ ನಡೆದಿದೆ. ತಳಕು ಪೊಲೀಸ್ ವೃತ್ತ ನಿರೀಕ್ಷಕ ಹನುಮಂತಪ್ಪ ಎಂ ಶಿರೇಹಳ್ಳಿ ಹಾಗೂ ನಾಯಕನಹಟ್ಟಿ ಪಿಎಸ್ಐ ಜಿ. ಪಾಂಡುರಂಗಪ್ಪ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಅಬಕಾರಿ ಅಧೀಕ್ಷಕ ಕಿರಣ್ ಮತ್ತು ಅವರ ಸಿಬ್ಬಂದಿ ಕೂಡ ಸಾಥ್ ನೀಡಿದ್ದರು.








