ಶಿವಮೊಗ್ಗ : ದೇಶದಲ್ಲಿ ಮತ್ತೆ ಕೊರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಅದಂತೆ ರಾಜ್ಯದಲ್ಲೂ ಕೂಡ ಇತ್ತಿಚಿಗೆ ಕೆಲವು ದಿನಗಳಿಂದ ಕೊರೋನಾ ಸೋಂಕು ಪ್ರಕರಣಗಳು ಬೆಳಕಿಗೆ ಬಂದಿವೆ ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ 18 ವರ್ಷದ ಯೋದಿಗೆ ಕೆ ಎಫ್ ಡಿ ಸೋಂಕು ಪಾಸಿಟಿವ್ ಆಗಿ ದೃಢಪಟ್ಟಿರುವ ಬೆಳಕಿಗೆ ಬಂದಿದೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಕೆಎಫ್ಡಿ ಸೋಂಕು ಪತ್ತೆಯಾಗಿದೆ.18 ವರ್ಷದ ಯುವತಿಗೆ ಕೆ ಎಫ್ ಡಿ ಪಾಸಿಟಿವ್ ಸೋಂಕು ಪತ್ತೆಯಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಅನಾರೋಗ್ಯ ಹಿನ್ನೆಲೆಯಲ್ಲಿ ಯುವತಿ ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ದಾಖಲಾಗಿದ್ದಳು ಈ ವೇಳೆ ಯುವತಿಯಲ್ಲಿ ಕೆಫ್ಡಿ ಸೋಂಕು ಪತ್ತೆಯಾಗಿದೆ.
ಎರಡನೇ ಬಾರಿ ಆರ್ ಟಿ ಸಿ ಪಿ ಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ದೃಢವಾಗಿದೆ ಮೂರು ದಿನ ಮೈಗ್ಗಾನ್ ಆಸ್ಪತ್ರೆಯ ಐಸಿಯು ನಲ್ಲಿ ಯುವತಿಯು ಚಿಕಿತ್ಸೆ ಪಡೆದಿದ್ದಳು ಎನ್ನಲಾಗುತ್ತಿದೆ. ಶುಕ್ರವಾರ ಸಂಜೆ ಮಣಿಪಾಲದ ಕೆ ಎಂ ಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.