ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಒಂದೇ ದಿನ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿದ್ದು, 7 ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ಚಿಕ್ಕಪೇಟೆನಗರದ ಭಾಷಾ ಎಂಬುವವರ ಮನೆ ಸಮೀಪ ಸಂಜೆ 5 ಗಂಟೆ ಸುಮಾರಿಗೆ ಹೆಜ್ಜೇನು ದಾಳಿ ನಡೆಸಿದ್ದು, ಹೆಜ್ಜೇನು ದಾಳಿಯಲ್ಲಿ ಭಾಷಾ, ಪತ್ನಿ ಅಸ್ಮಾ, ಮಕ್ಕಳಾದ ಆರೀಫ್, ಅನೀಫ್, ಭಾಷಾ ಪಕ್ಕದ ಮನೆ ನಿವಾಸಿ ಯಾಸೀನ್, ಹಾಸಿಗೆ ರಿಪೇರಿಗಾಗಿ ತೆರಳಿದ್ದ ಹುಸೇನ್ ಸಾಬ್, ಬಾಬಾ ಸಾಬ್ ಎಂಬುವರು ಗಾಯಗೊಂಡಿದ್ದಾರೆ.
ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಸೇನ್ ಸಾಬ್ (68) ಎಂಬುವವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.