ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳ ಸಂಖ್ಯೆ 2,000 ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು 56 ಹೊಸ ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 56 ಕೊರೊನ ಕೇಸ್ ಪತ್ತೆಯಾಗಿದ್ದು, ಇದುವರೆಗೂ ರಾಜ್ಯದಲ್ಲಿ ಕೋರೋನ ಸೋಂಕಿತರ ಸಂಖ್ಯೆ 2045 ಕ್ಕೆ ಏರಿಕೆಯಾಗಿದೆ. ಇನ್ನು ಕರೋನ ಆಕ್ಟಿವ್ ಪ್ರಕರಣಗಳ ಸಂಖ್ಯೆ 653 ಇವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.