ದಾವಣಗೆರೆ : ಶಂಕಿತ ಡೆಂಗ್ಯೂಗೆ 2 ವರ್ಷ 11 ತಿಂಗಳ ಮಗು ಸಾವನ್ನಪ್ಪಿದ ಘಟನೆ ದಾವಣಗೆರೆ ಚನ್ನಗಿರಿ ತಾಲೂಕಿನ ಚಿಕ್ಕೊಡ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ನಿರ್ವಾಣ ಕುಮಾರ್(2) ಎಂದು ಗುರುತಿಸಲಾಗಿದೆ. ಡೆಂಗ್ಯೂನಿಂದ ಬಳಲುತ್ತಿದ್ದ ಬಾಲಕನನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ.
ಗ್ರಾಮದಲ್ಲಿ ಶುಚಿತ್ವ ಇರದ ಹಿನ್ನೆಲೆ ಡೆಂಗ್ಯೂ ಜ್ವರ ತಗುಲಿ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.