ತುಮಕೂರು : ತುಮಕೂರು ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ತೆಂಗಿನಕಾಯಿ ನೀರಿನ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರಿನ ಮೀಸೆತಿಮ್ಮನಹಳ್ಳಿಯಲ್ಲಿ ಘಟನೆ ನಡೆದಿದ್ದು, ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ತೆಂಗಿನಕಾಯಿ ನೀರಿನ ಗುಂಡಿಗೆ ಬಿದ್ದು ಸಾವನ್ನಪ್ಪಿದೆ. ಮೃತ ಮಗುವನ್ನು ಕುಸುಮಾಕುಮಾರಿ (2) ಎಂದು ಗುರುತಿಸಲಾಗಿದೆ.
ಬಿಹಾರ ಮೂಲದ ಹರೀಂದ್ರ ಕುಮಾರ್, ರೀನಾದೇವಿ ದಂಪತಿ ಮಾನ್ಯಶ್ರೀ ತೆಂಗಿನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ದಂಪತಿಯ ಪುತ್ರಿ ಕುಸುಮಾಕುಮಾರಿ ನೀರಿನ ಗುಂಡಿಗೆ ಮೃತಪಟ್ಟಿದೆ. ಹೊನ್ನಾವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.