ಕೋಲಾರ : ಬಾರ್ ಮಾಲೀಕರೊಬ್ಬರ ಬಳಿ 20 ಸಾವಿರ ಲಂಚ ಸ್ವೀಕರಿಸುವಾಗ ಪಿಎಸ್ಐ ಹಾಗು ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಪಿಎಸ್ಐ ಅರ್ಜುನ್ ಗೌಡ ಹಾಗೂ ಕಾನ್ಸ್ಟೇಬಲ್ ಸುರೇಶ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ಬಾರ್ ಮಾಲೀಕ ಪ್ರಶಾಂತ್ ಬಳಿ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮುಂಗಡವಾಗಿ 20,000 ಲಾಂಚ ಸ್ವೀಕರಿಸುವಾಗ ಪಿಎಸ್ಐ ಅರ್ಜುನ್ ಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಅರ್ಜುನನನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.