ಮಂಗಳೂರು : ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಇದೀಗ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ನೆಲೆಯಲ್ಲಿ ನಗರದಲ್ಲಿ ಯಾವುದೇ ರೀತಿಯಾಗಿ ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆದಂತೆ ಸುಮಾರು 2000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಮಂಗಳೂರು ಎಸ್ಪಿ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಹೌದು ವಕ್ಫ್ ತಿದ್ದುಪಡಿ ವಿರುದ್ಧ ಪ್ರತಿಭಟನೆ ನಡೆಯಲಾಗುತ್ತಿದ್ದು ಕರ್ನಾಟಕ ಉಲಿಮಾ ಸಂಘಟನೆಯಿಂದ ಈ ಒಂದು ಪ್ರತಿಭಟನೆ ನಡೆಯುತ್ತಿದೆ ಮಂಗಳೂರಿನ ಗಾರ್ಡನ್ ಮೈದಾನದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಮಂಗಳೂರು ನಗರದಲ್ಲಿ ಐವರು ಎಸ್ ಪಿ ಗಳ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಐವರು ಎಸ್ಪಿ ಗಳು, ಐವರು ಹೆಚ್ಚುವರಿ ಎಸ್ಪಿ ಗಳು, 20 ಡಿವೈಎಸ್ಪಿ, 230 ಇನ್ಸ್ಪೆಕ್ಟರ್ ಗಳು ಸೇರಿದಂತೆ 2,000ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅರೆಸೇನಾಪಡೆ, 20 ಕೆಎಸ್‌ಆರ್‌ಪಿ ತುಕಡಿ, 20 ಶಸಸ್ತ್ರ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿದೆ ಎಂದು ಅನುಪಮ್ ಅಗರ್ವಾಲ್ ಮಾಹಿತಿ ನೀಡಿದರು.
ಧರಣಿಯ ಸ್ಥಳ ಮಂಗಳೂರಿನ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶದಲ್ಲಿ ಭದ್ರತೆ ನೀಡಲಾಗುತ್ತಿದ್ದು, ಮಂಗಳೂರಿನ ನಗರದ ಹಲವೆಡೆ ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಇಂದು ಇಡೀ ದಿನ ನಗರದಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ. ಪ್ರತಿಭಟನೆಗೆ ಮುಚ್ಚಳಿಕೆ ಬಳಸಿಕೊಂಡು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ. ಮುಂಜಾಗ್ರತ ಕ್ರಮವಾಗಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.