ಬೆಂಗಳೂರು : ಇದೇ ಮಾರ್ಚ್ 31 ರಂದು ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಇದೀಗ ಕೆ ಎಸ್ ಆರ್ ಟಿ ಸಿ ಸಂಸ್ಥೆಯಿಂದ ಎರಡು ಸಾವಿರಕ್ಕೂ ಅಧಿಕ ಬಸ್ಗಳ ಕಾರ್ಯಾಚರಣೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಇದೀಗ ಸಿಹಿ ಸುದ್ದಿ ನೀಡಿದೆ. ಯುಗಾದಿ ಹಬ್ಬ ಹಿನ್ನೆಲೆ ಮಾರ್ಚ್ 28 ರಿಂದ 30ರವರೆಗೆ ಎರಡು ದಿನಗಳ ಕಾಲ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.
ಹೌದು ಮಾರ್ಚ್ 28ರಿಂದ 30 ವರೆಗೆ 2000 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ಕಾರ್ಯಾಚರಣೆ ನಡೆಸಲಿವೆ. ಯುಗಾದಿ ಹಬ್ಬದ ನಿಮಿತ್ಯವಾಗಿ ಹೆಚ್ಚುವರಿ ಬಸ್ ಬಿಡಲಾಗಿದ್ದು, ಮೆಜೆಸ್ಟಿಕ್ನಿಂದ ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಂತಿನಗರ, ಸ್ಯಾಟಲೈಟ್, ಪೀಣ್ಯ ಬಸವ ನಿಲ್ದಾಣದಿಂದ ಕೆ ಎಸ್ ಆರ್ ಟಿ ಸಿ ಬಸ್ ಸಂಚರಿಸಲಿವೆ. ಯುಗಾದಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಇದೀಗ ಬಸ್ ವ್ಯವಸ್ಥೆ ಮಾಡಲಾಗಿದೆ.
ಕೆಎಸ್ಆರ್ಟಿಸಿ ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್ ಕೋಚ್ ಸೇರಿದಂತೆ ಎಲ್ಲಾ ಐಷಾರಾಮಿ ಬಸ್ ಗಳು ಲಭ್ಯ ಎಂದು ಕೆ ಎಸ್ ಆರ್ ಟಿ ಸಿ ಈ ಕುರಿತು ಮಾಹಿತಿ ನೀಡಿದೆ. ಅಲ್ಲದೆ ಯುಗಾದಿ ಹಬ್ಬ ಮುಗಿದ ಬಳಿಕವೂ ಕೂಡ ವಿಶೇಷ ಬಸ್ ಕಾರ್ಯಾಚರಣೆ ನಡೆಸಲಿದೆ. ಮಾರ್ಚ್ 31ರಂದು ವಾಪಸ್ ಬರುವವರಿಗೆ ಕೆಎಸ್ಆರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ. ಕೇವಲ ರಾಜ್ಯ ಅಷ್ಟೇ ಅಲ್ಲದೆ ಅಂತರಾಜ್ಯದಿಂದಲೂ ಕೆ ಎಸ್ ಆರ್ ಟಿ ಸಿ ಬಸ್ ಗಳು ಲಭ್ಯವಿರಲಿವೆ. ಹೆಚ್ಚುವರಿ ಬಸ್ ವ್ಯವಸ್ಥೆ ಬಗ್ಗೆ ಕೆಎಸ್ಆರ್ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಈ ವಿಶೇಷ ಬಸ್‌ಗಳು ಮಾರ್ಚ್ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿದ್ದು, ಮುಂಗಡ ಬುಕ್ಕಿಂಗ್‌ಗೆ ಅವಕಾಶವಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟಣೆ ನೀಡಿದ್ದು, ಮಾರ್ಚ್ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್ 31 ರಂದು ರಂಜಾನ್ ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.
ಮಾರ್ಚ್ 30ರಂದು ಚಂದ್ರಮಾನ ಯುಗಾದಿ, ಮಾ.31ರಂದು ರಂಜಾನ್ ಹಬ್ಬವಿರುವುದರಿಂದ ಕರ್ನಾಟಕ ರಸ್ತೆ ಸಾರಿಗೆ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಾ.28 ರಿಂದ ಮಾ.30ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಾಪಸ್ ಆಗುವವರೆಗೆ ಮಾರ್ಚ್ 31ರಂದು ವಿಶೇಷ ಬಸ್ಗಳನ್ನು ಬಿಡಲಾಗಿದೆ.
ಮುಂಗಡ ಬುಕ್ಕಿಂಗ್ ಶೇ 10 ರಷ್ಟು ಡಿಸ್ಕೌಂಟ್!
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
ಇ-ಟಿಕೇಟ್ ಬುಕಿಂಗ್‌ನ್ನು https://ksrtc.in/ ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ