ನವದೆಹಲಿ : 2020ರ ದೆಹಲಿ ಗಲಭೆ ಪ್ರಕರಣದಲ್ಲಿ 31 ವರ್ಷದ ಸಾಮಾಜಿಕ ಕಾರ್ಯಕರ್ತೆ ಗುಲ್ಫಿಶಾ ಫಾತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠ ಈ ಕುರಿತು ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಯುಪಿಎ ಕಾಯ್ದೆಯಡಿ ಬಂಧಿತರಾಗಿರುವ ಫಾತಿಮಾ ನಾಲ್ಕು ವರ್ಷ ಏಳು ತಿಂಗಳಿನಿಂದ ಬಂಧನದಲ್ಲಿದ್ದಾರೆ.
ಫೆಬ್ರವರಿ 2020 ರ ದೆಹಲಿ ಗಲಭೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸೂಕ್ತ ವಿಚಾರಣೆ ನಡೆಸದೆ ಆಕೆಯನ್ನು ಬಂಧನದಲ್ಲಿ ಇರಿಸಲಾಗಿದ್ದು, ವಿಚಾರಣೆಯಲ್ಲಿ ಅನಗತ್ಯ ವಿಳಂಬವಾದರೆ ಕಾಯ್ದೆ ಅನ್ವಯವಾಗುತ್ತದೆ ಎಂದು ಆಕೆಯ ವಕೀಲ ಕಪಿಲ್ ಸಿಬಲ್ ವಾದಿಸಿದರು.