ಮಹಾರಾಷ್ಟ್ರ : ಅಪಘಾತ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಒಂದು ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ 23 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೈಶಾಳ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.
KSRTC ಬಸ್ ಮಹಾರಾಷ್ಟ್ರದ ಮೀರಜ್ ನಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ಕೆಎಸ್ಆರ್ಟಿಸಿ ಬಸ್ ಟ್ರ್ಯಾಕ್ಟರ್ ಅನ್ನು ಓವರ್ ಟೇಕ್ ಮಾಡಲು ಮುಂದಾಗಿದೆ. ಈ ಸಂದರ್ಭದಲ್ಲಿ ಎದುರಿಗೆ ಬಂದ ಲಾರಿ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ.
ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಪಕ್ಕದ ಗುಂಡಿಗೆ ಉರಳಿ ಬಿದ್ದಿದೆ. ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿ 40ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. 23 ಜನರಿಗೆ ಗಾಯಗಳಾಗಿದ್ದು, ಕೂಡಲೇ ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. 23 ಜನರಿಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.