ಬೆಳಗಾವಿ : ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಸದನದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ, ಬಾಕಿ ಉಳಿದ ಗೃಹಲಕ್ಷ್ಮೀ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಹಣ ಸಮರ್ಪಕವಾಗಿ ಮಹಿಳೆಯರ ಖಾತೆಗೆ ಬರುತ್ತಿಲ್ಲ. ಫೆಬ್ರವರಿ, ಮಾರ್ಚ್ ತಿಂಗಳ ಹಣ ಇನ್ನೂ ಸಂದಾಯವಾಗಿಲ್ಲ. ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಮೋಸವಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.








