ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಚಲಿಸುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದಿದ್ದು, ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲ ತಾಲೂಕಿನ ಕದಬಹಳ್ಳಿ ಬಳಿ ಶನಿವಾರ ಮುಂಜಾನೆ ನಡೆದಿದೆ.
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಖಾಸಗಿ ಬಸ್ ಚಲಿಸುತ್ತಿತ್ತು.ಕದಬಹಳ್ಳಿ ಟೋಲ್‍ಗೇಟ್ ಬಳಿ ಇದ್ದಕ್ಕಿದ್ದಂತೆ ಬಸ್‍ನಲ್ಲಿ ಬೆಂಕಿ ಕಾಣಿಸಿದೆ. ಕೂಡಲೇ ಬಸ್ ಚಾಲಕನ ಸೂಚನೆಯಿಂದ ಎಲ್ಲ ಪ್ರಯಾಣಿಕರು ಲಗೇಜ್ ಸಮೇತ ಕೆಳಗೆ ಇಳಿದಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಸ್‍ನ ಬೆಂಕಿಯನ್ನು ನಂದಿಸಿದರು. ಆದರೆ ಅಸ್ಟೊತ್ತಿಗಾಗಲೇ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಈ ಒಂದು ಘಟನೆ ಕುರಿತಂತೆ ಬಿಂಡಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.