ಉತ್ತರಕನ್ನಡ : ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 25 ಜನರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿರುವ ಘಟನೆ ಉತ್ತರ ನ್ನಡ ಜಿಲ್ಲೆಯ ವಿರ್ಜಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.
ಹೌದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೆಂಕಿಯ ಕೆನ್ನಾಲಿಗೆ ಸಂಪೂರ್ಣವಾಗಿ ಬಸ್ ಅನ್ನು ಆವರಿಸಿದೆ. ಈ ಒಂದು ಬಸ್ ನಲ್ಲಿ ಕೈಗಾ ಅಣು ವಿದ್ಯುತ್ ಸ್ಥಾವರದ ಉದ್ಯೋಗಿಗಳು ನಲ್ಲಿ ಪ್ರಯಾಣಿಸುತ್ತಿದ್ದರು.
ಬೆಂಕಿ ಕಾಣಿಸುತ್ತಿದಂತೆ ಬಸ್ ನಲ್ಲಿ ಇದ್ದಂತಹ 25ಕ್ಕೂ ಹೆಚ್ಚು ಜನರು ಬಸ್ಸಿನಿಂದ ಕೆಳಗಿಳಿದಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಘಟನಾ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನೆ ಕುರಿತಂತೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.