ಯಾದಗಿರಿ : ವಸತಿ ನಿಲಯದಲ್ಲಿ ಊಟ ಸೇವಿಸಿ 29 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಯಾದಿಗಿರಿ ಜಿಲ್ಲೆಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ವಸತಿ ನಿಲಯದಲ್ಲಿ ಊಟ ಸೇವಿಸಿ 29 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ನಿನ್ನೆ ರಾತ್ರಿ ಹಾಸ್ಟೆಲ್ ನಲ್ಲಿ ಊಟ ಸೇವಿಸಿದ್ದ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.
ಗುರುಮಠಕಲ್ ನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟಲ್ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಯಾದಗಿರಿಯ ಯಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರಿಗೆ ಫುಡ್ ಪಾಯಿಸನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್ ಗೆ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಲು ಭರವಸೆ ನೀಡಿದ್ದಾರೆ.








