ಬೆಂಗಳೂರು : ರಾಜ್ಯದಲ್ಲಿ ಇಂದು 286 ಡೆಂಘಿ ಪ್ರಕರಣಗಳು ಪತ್ತೆಯಾಗಿದ್ದು, ಹಾಗಾಗಿ ರಾಜ್ಯದಲ್ಲಿ ಡೆಂಘಿ ಸಕ್ರಿಯ ಪ್ರಕರಣಗಳ ಸಂಖ್ಯೆ 695 ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ನಡೆಸಿದಂತ ಪರೀಕ್ಷೆಯಲ್ಲಿ ತಿಳಿದುಬಂದಿದೆ. ರಾಜ್ಯದಲ್ಲಿ ಡೇಂಗಿಗೆ ಇದುವರೆಗೆ 6 ಜನರು ಬಲಿಯಾಗಿದ್ದಾರೆ.

ಇನ್ನೂ ಬೆಂಗಳೂರಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ನಿನ್ನೆ ಆರೋಗ್ಯ ಇಲಾಖೆಯಿಂದ 300 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 18 ಜನರಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯ ವರದಿಯಿಂದ ತಿಳಿದು ಬಂದಿದೆ.

ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಬರೋಬ್ಬರಿ 31 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಹೀಗಾಗಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 1,564ಕ್ಕೆ ಏರಿಕೆಯಾದಂತೆ ಆಗಿದೆ.

Share.
Exit mobile version