ನವದೆಹಲಿ:2ಜಿ ತರಂಗಾಂತರ ಹಂಚಿಕೆ ಪ್ರಕರಣದಲ್ಲಿ 2012ರಲ್ಲಿ ನೀಡಿದ್ದ ತೀರ್ಪನ್ನು ಮಾರ್ಪಾಡು ಮಾಡುವಂತೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

2012ರಲ್ಲಿ ಯುಪಿಎ ಸರಕಾರವು ವಿವಿಧ ಕಂಪನಿಗಳಿಗೆ ನೀಡಿದ್ದ 2ಜಿ ತರಂಗಾಂತರ ಪರವಾನಗಿಗಳನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್, ನೈಸರ್ಗಿಕ ಸಂಪನ್ಮೂಲಗಳನ್ನು ವರ್ಗಾಯಿಸುವಾಗ ಅಥವಾ ಪ್ರತ್ಯೇಕಿಸುವಾಗ, ಎಲ್ಲ ಅರ್ಹ ವ್ಯಕ್ತಿಗಳು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ವ್ಯಾಪಕ ಪ್ರಚಾರ ನೀಡುವ ಮೂಲಕ ಹರಾಜು ವಿಧಾನವನ್ನು ಅಳವಡಿಸಿಕೊಳ್ಳಲು ರಾಜ್ಯವು ಬದ್ಧವಾಗಿದೆ ಎಂದು ಹೇಳಿತ್ತು.

Share.
Exit mobile version