ಬೆಂಗಳೂರು : ನೇಣು ಬಿಗಿದುಕೊಂಡು ದ್ವಿತೀಯ ವರ್ಷದ ಸ್ನಾತಕೋತರ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಹೆಬ್ಲಗುಪ್ಪೆ ಗ್ರಾಮದ ನಿವಾಸಿ ಎಂದು ತಿಳಿದಿದೆ.
ಹೌದು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಪಾವನ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ಬೆಳಿಗ್ಗೆ 10:30 ಸುಮಾರಿಗೆ ಹೆಬ್ಲಗುಪ್ಪೆಯ ಪಾವನ ಎಂಬ ಯುವತಿ ನೇಣಿಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.