ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಬೃಹತ್ ಮರವೊಂದು ಬಿದ್ದ ಪರಿಣಾಮ ಮೂರು ಕಾರುಗಳು ಸಂಪೂರ್ಣ ಜಖಂ ಆಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬೃಹತ್ ಮರವೊಂದು ಬಿದ್ದಿದ್ದು, ಮೂರು ಕಾರುಗಳು ಸಂಪೂರ್ಣ ಜಖಂ ಆಗಿವೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಇನ್ನು ಕಳೆದ ತಿಂಗಳ ಆಗಸ್ಟ್ 17 ರಂದು ಬೆಂಗಳೂರಿನಲ್ಲಿ ಮರ ಬಿದ್ದು ಗಾಯಗೊಂಡಿದ್ದ ಆಟೋ ಚಾಲಕ ಶಿವರುದ್ರಯ್ಯ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ವಿಜಯನಗರದಲ್ಲಿ ಬೃಹತ್ ಮರ ಧರೆಗೆ ಉರುಳಿ ಬಿದ್ದಿತ್ತು. ಈ ವೇಳೆ ಆಟೋ ಸಂಪೂರ್ಣ ಜಖಂಗೊಂಡಿತ್ತು. ಈ ವೇಳೆ ಚಾಲಕ, ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿತ್ತು. ಆದರೆ ಮಾರ್ಗಮಧ್ಯದಲ್ಲಿಯೇ ಆಟೋ ಚಾಲಕ ಶಿವರುದ್ರಯ್ಯ ಸಾವನ್ನಪ್ಪಿಪ್ಪಿದ್ದರು.








