ಹಾವೇರಿ : ಕುರಿ ತುಂಬಿಕೊಂಡು ತೆರಳುತ್ತಿದ್ದ ಬೊಲೆರೋ ವಾಹನ ಒಂದು ರಸ್ತೆ ಬದಿಯ ವಾಹನಕ್ಕೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ವ್ಯಕ್ತಿಗಳು ಮೃತಪಟ್ಟಿದ್ದು, ಹಲವರಿಗೆ ಗಾಯವಾಗಿದ್ದು, ಅಲ್ಲದೆ 20 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಬಳಿ ನಡೆದಿದೆ.
ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗ ಮಧ್ಯ ಈ ದುರಂತ ಸಂಭವಿಸಿದೆ.ಅಪಘಾತದಲ್ಲಿ ರಾಣೆಬೆನ್ನೂರು ತಾಲೂಕಿನ ಖಾಗೋಳ ಗ್ರಾಮದ ಗುಡ್ಡಪ್ಪ ಕೈದಾಳಿ (40) ಮೈಲಾರಪ್ಪ ಕೈದಾಳಿ (41) ಶಿವರಾಜ್ ಹೊಳೆಪ್ಪನವರ (22) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ.ಬೀರಪ್ಪ ನಿಂಗರಾಜ್ ಹಿತ್ತಲಮನಿ ನಿಂಗಪ್ಪ ಕೊರಗುಂದ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ದಾವಣಗೆರೆ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಅಪಘಾತವು ಬಂಕಾಪುರ ಟೋಲ್ ಬಳಿ ನಡೆದಿದ್ದು, ಈ ದುರ್ಘಟನೆಯಲ್ಲಿ ಮೂವರು ವ್ಯಕ್ತಿಗಳು ಸೇರಿದಂತೆ 20 ಕುರಿಗಳು ಸಾವನನಪ್ಪಿವೆ. ಕುರಿ ತುಂಬಿಕೊಂಡು ಹೋಗುತ್ತಿದ್ದ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.