ಚಿತ್ರದುರ್ಗ : ಇಂದು ಚಿತ್ರದುರ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಟಿಟಿ ವಾಹನ ಒಂದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು ಇವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.
ಹೌದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಟಿಟಿ ವಾಹನ ಪಲ್ಟಿಯಾಗಿ ಮೂವರು ಸಾವನಪ್ಪಿದ್ದಾರೆ. ಶಂಕರಿಬಾಯಿ (65) ಕುಮಾರ್ ನಾಯಕ್ (46) ಮತ್ತು ಶ್ವೇತ (38) ಸಾವನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಐವರಿಗೆ ಗಂಭೀರವಾದ ಗಾಯಗಳಾಗಿದ್ದು ಕೂಡಲೇ ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.