ವಿಜಯಪುರ : ಇಂದು ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟೀಯ ಹೆದ್ದಾರಿ NH50 ರಲ್ಲಿ ಈ ಒಂದು ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, ಘಟನೆಯಲ್ಲಿ ಹಲವರಿಗೆ ಗಂಭೀರವಾದ ಗಾಯಗಳಾಗಿವೆ.ಸದ್ಯ ಘಟನಾಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಶವಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅಲ್ಲದೇ ಈ ಒಂದು ಭೀಕರವಾದ ಕಾರು ಅಪಘಾತದಲ್ಲಿ ಗಾಯಗೊಂಡ ಇನ್ನುಳಿದ ಹಲವರಿಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತಂತೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.