ಬೆಂಗಳೂರು : ಬ್ಯಾಂಕಾಕ್ ನಿಂದ ಅಕ್ರಮವಾಗಿ ತಂದಿದ್ದ 35 ವನ್ಯಜೀವಿಗಳನ್ನು ಬೆಂಗಳೂರಿನಲ್ಲಿ ಸೀಜ್ ಮಾಡಲಾಗಿದೆ.
ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್ 2ರಲ್ಲಿ ಬ್ಯಾಂಕಾಕ್ ನಿಂದ ತಂದಿದ್ದ 35 ವನ್ಯಜೀವಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್ ನಿಂದ ಬೆಂಗಳೂರಿಗೆ ತಂದಿದ್ದ 35 ವನ್ಯಜೀವಿಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಮೂವರು ಪ್ರಯಾಣಿಕರನ್ನು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಹಾಗೂ ಕಸ್ಟಮ್ಸ್ ಕಾಯ್ದೆಯಡಿ ಬಂಧಿಸಲಾಗಿದೆ.








