ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ನಾಲ್ಕು ರೂಪಾಯಿ ಏರಿಕೆ ಮಾಡಿ ಸಂಪುಟದಲ್ಲಿ ಅನುಮೋದನೆ ದೊರೆಯಿತು. ಇದರ ಬೆನ್ನಲ್ಲೆ ಇದೀಗ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ವಿದ್ಯುತ್ ದರ ಏರಿಕೆ ಮಾಡಿ ಇಂದು ಸಂಜೆ ಕೆಇಆರ್‌ಸಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹೌದು ನಂದಿನಿ ಹಾಲಿನ ದರ ಏರಿಕೆ ಬೆನ್ನೆಲೆ ವಿದ್ಯುತ್ ತರ ಏರಿಕೆ ಶಾಕ್ ಎದುರಾಗಿದ್ದು, ಸಂಜೆ 4:30ಕ್ಕೆ ವಿದ್ಯುತ್ ದರ ಏರಿಕೆಯ ಬಗ್ಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂರು ವರ್ಷಗಳ ವಿದ್ಯುತ್ ದರ ಇಂದೇ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರತಿ ಯುನಿಟ್ ಗೆ 36 ಪೈಸೆ ಹೆಚ್ಚಿಸಿ ಕೆಇಆರ್‌ಸಿ ದರ ಘೋಷಿಸಲಿದೆ. ದರ ಏರಿಕೆಗೆ ಎಸ್ಕಾಂಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಇಂದು ಅಧಿಕೃತವಾಗಿ ವಿದ್ಯುತ್ ದರ ಕೆಇಆರ್‌ಸಿ ಘೋಷಣೆ ಮಾಡಲಿದೆ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಕೆಇಆರ್‌ಸಿ ವಿದ್ಯುತ್ ದರ ಏರಿಕೆ ಮಾಡಲಿದೆ.