ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಬೈಕ್ ಮೇಲೆ ತೆರಳುತ್ತಿದ್ದಾಗ ಕಂಟೆನರ್ ಬಿದ್ದು 4 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರವಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನರಸನಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ.
ಘಟನೆ ವೇಳೆ 4 ವರ್ಷದ ಬಾಲಕಿ ಬೈಕ್ ಮೇಲೆ ತೆರಳುತ್ತಿದ್ದಾಗ ಕಂಟೆನರ್ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಲ್ಲದೇ ಕಂಟೆನರ್ ಕೆಳಗಡೆ ಮತ್ತಿಬ್ಬರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಶಾ ಫೌಂಡೇಶನ್ ಗೆ ಹೋಗಿ ವಾಪಸ್ ಬರುವಾಗ ಈ ಘೋರವಾದ ದುರಂತ ಸಂಭವಿಸಿದೆ.