ಪಣಜಿ: 4 ವರ್ಷದ ಪುತ್ರನನ್ನು ಕೊಂದು ಸೂಟ್ಕೇಸ್ನಲ್ಲಿ ತುಂಬಿ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ಬಿದ್ದ ಸಿಇಓ ಸುಚನಾ ಸೇಠ್ ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆ ನಾನೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ.
ಗೋವಾ ಪೊಲೀಸರ ವಿಚಾರಣೆಯ ವೇಳೆ ಮಗುವನ್ನು ತಾನೇ ಕೊಂದಿರುವುದಾಗಿ ಆಕೆ ಹೇಳಿದ್ದಾಳೆ. ಅಲ್ಲದೆ ಕಾರಣವನ್ನು ಕೂಡ ಸುಚನಾ ವಿವರಿಸಿದ್ದಾಳೆ. ಭಾನುವಾರ ತಂದೆ ಮಗುವಿಗೆ ಪದೇ ಪದೇ ಕರೆ ಮಾಡುತ್ತಿದ್ದರು. ಅಲ್ಲದೆ ಮಗು ಜೊತೆ ಮಾತನಾಡುವುದಕ್ಕೆ ವಿಡಿಯೋ ಕಾಲ್ ಮಾಡಿದ್ರು.
ಆಗ ಮಗು ಮಲಗಿದೆ ಎಂದು ಪತ್ನಿಸುಚನಪತಿಗೆ ತಿಳಿಸಿದ್ದಾಳೆ ತಂದೆ ಜೊತೆ ಮಗು ಮಾತನಾಡಿಸೋಕೆ ಸುಚನಗೆ ಇಷ್ಟವಿರಲಿಲ್ಲ ಹೀಗಿದ್ದರೂ ತಂದೆ ಮಗುವಿನ ಜೊತೆ ಮಾತನಾಡಲು ಪದೇಪದೇ ಕಾಲ್ ಮಾಡಿದ್ರು.
ವಾರಕ್ಕೊಮ್ಮೆ ಪತಿ ವೆಂಕಟರಮಣನಿಗೆ ಮಗುವನ್ನ ವಿಡೀಯೋ ಕಾಲ್ ಮೂಲಕ ತೋರಿಸಬೇಕಿತ್ತು. ಆದರೆ ಗಂಡನಿಗೆ ಮಗುವನ್ನು ತೋರಿಸುವುದಕ್ಕೆ ಇಷ್ಟ ಇರಲಿಲ್ಲ. ನನ್ನ ಮಗು ಕಂಡರೆ ನನಗೂ ಕೂಡ ಬಹಳ ಪ್ರೀತಿ.ಸೌಂಡ್ ಆಗುತ್ತಿದೆ ಮಲಗು ಅಂತ ಮಗುವಿಗೆ ಸುಚನ ಹೇಳಿದ್ದಳು.
ತಂದೆ ಜೊತೆ ಮಗು ಮಾತನಾಡಿಸೋಕೆ ಸುಚನಗೆ ಇಷ್ಟವಿರಲಿಲ್ಲ ಹೀಗಿದ್ದರೂ ತಂದೆ ಮಗುವಿನ ಜೊತೆ ಮಾತನಾಡಲು ಪದೇಪದೇ ಕಾಲ್ ಮಾಡಿದ್ರು.ಹೀಗಾಗಿ ನಾನು ಮಗುವಿನ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ. ಮಗು ಪ್ರಜ್ಞೆ ತಪ್ಪಿದೆ ಎಂದುಕೊಂಡಿದ್ದೆ. ಆದರೆ ಮಗು ಸಾವನ್ನಪ್ಪಿತ್ತು ಎಂದಿದ್ದಾಳೆ.
ಇದೇ ನೋವಿನಲ್ಲಿ ಕೈ ಕುಯ್ದ ಆತ್ಮಹತ್ಯೆಗೆ ಯತ್ನಿಸಿದೆ, ಆದರೆ ಅದು ಸಾಧ್ಯವಾಗಿಲ್ಲ. ಗಾಬರಿಯಲ್ಲಿ ಏನು ಮಾಡಬೇಕೆಂದು ತೋಚದೆ ಸೂಟ್ ಕೇಸ್ ನಲ್ಲಿ ಮಗುವಿನ ಬಾಡಿ ಹಾಕಿ ಪರಾರಿಯಾಗಲು ಯತ್ನಿಸಿದೆ ಎಂದು ವಿವರಿಸಿದ್ದಾಳೆ.