ಮೆಕ್ಸಿಕೋ : ಬೆಳ್ಳಂಬೆಳಗ್ಗೆ ಮೆಕ್ಸಿಕೋದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಭೀಕರ ಬಸ್ ಅಪಘಾತದಲ್ಲಿ 41 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಕ್ಷಿಣ ಮೆಕ್ಸಿಕೋದಲ್ಲಿ ಭೀಕರ ಬಸ್ ಅಪಘಾತದಲ್ಲಿ 41 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಆಗಮಿಸುತ್ತಿದ್ದಾರೆ
ಅಪಘಾತದ ಬಗ್ಗೆ ಮಾಹಿತಿ ನೀಡಿದ ತಬಾಸ್ಕೊದ ಕೊಮಲ್ಕಾಲ್ಕೊ ಮೇಯರ್ ಒವಿಡಿಯೊ ಪೆರಾಲ್ಟಾ, ‘ಅಗತ್ಯ ಸಹಾಯವನ್ನು ಒದಗಿಸಲು ನಾವು ಸ್ಥಳೀಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸುತ್ತಿದ್ದೇವೆ’ ಎಂದು ಹೇಳಿದರು. ತುರ್ತು ಸೇವೆ ಒದಗಿಸಲಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 44 ಪ್ರಯಾಣಿಕರು ಇದ್ದರು ಎಂದು ಬಸ್ ನಿರ್ವಾಹಕ ಟೂರ್ಸ್ ಅಕೋಸ್ಟಾ ಹೇಳಿದ್ದಾರೆ. ಅದೇ ಸಮಯದಲ್ಲಿ, ಕಂಪನಿಯು ಫೇಸ್‌ಬುಕ್ ಪೋಸ್ಟ್‌ನಲ್ಲಿ ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದೆ ಮತ್ತು ಬಸ್ ವೇಗದ ಮಿತಿಯೊಳಗೆ ಚಲಿಸುತ್ತಿತ್ತು ಮತ್ತು ಅಪಘಾತದ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಿದೆ ಎಂದು ಹೇಳಿದೆ.