ಪಶ್ಚಿಮ ಆಫ್ರಿಕಾದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಚಿನ್ನದ ಗಣಿ ಕುಸಿದ ಪರಿಣಾಮ 42 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಪಶ್ಚಿಮ ಆಫ್ರಿಕಾದ ದೇಶವಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿದು ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಆಫ್ರಿಕಾದ ಮಾಲಿ ದೇಶದಲ್ಲಿ ಚಿನ್ನದ ಗಣಿ ಕುಸಿದು 42 ಜನರು ಸಾವನ್ನಪ್ಪಿದ್ದಾರೆ ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಒಂದು ತಿಂಗಳ ಅವಧಿಯಲ್ಲಿ ಇಂತಹ ಘಟನೆ ಸಂಭವಿಸಿರುವುದು ಇದು ಎರಡನೇ ಬಾರಿ ಎಂಬುದು ಗಮನಾರ್ಹ. ಚೀನಾದ ಪ್ರಜೆಗಳು ನಡೆಸುತ್ತಿದ್ದ ಗಣಿಯಲ್ಲಿ 42 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಸರ್ಕಾರಿ ಪ್ರತಿನಿಧಿಗಳು ಬಹಿರಂಗಪಡಿಸಿದ್ದಾರೆ. ಈ ಘಟನೆಯ ಬಗ್ಗೆ ವಿವರಗಳು ಇನ್ನೂ ತಿಳಿದುಬರಬೇಕಾಗಿದೆ.