ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದೆ. ಮೇ.29 ರ ನಿನ್ನೆ ಕೋವಿಡ್ ನಿಂದಾಗಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ ರಾಜ್ಯಾಧ್ಯಂತ 42 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ.
ನಿನ್ನೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 42 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. 19 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೇ ಕೋವಿಡ್ ಸೋಂಕಿನಿಂದ ಒಬ್ಬರು ಸಾವನ್ನಪ್ಪಿರುವುದಾಗಿ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 463, ರಾಟ್ ಮೂಲಕ 50 ಸೇರಿದಂತೆ 513 ಜನರನ್ನು ಕೊರೋನಾ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 42 ಜನರಿಗೆ ಪಾಸಿಟಿವ್ ಬಂದಿದೆ. ಸದ್ಯ 42 ಆಕ್ಟೀವ್ ಕೇಸ್ ಇದ್ದಾವೆ. 33 ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದರೇ, ಮೂವರು ಸರ್ಕಾರಿ, ಆರು ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದೆ.
BREAKING : 43 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆ: ಹೈಕೋರ್ಟ್ ನಿಂದ ಆದೇಶವೇ ರದ್ದು.!