ನವದೆಹಲಿ:ದಕ್ಷಿಣ ಆಫ್ರಿಕಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 45 ಜನರು ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಚಾಲಕ ಸೇರಿದಂತೆ 46 ಪ್ರಯಾಣಿಕರಿದ್ದರು. ಅಪಘಾತದಲ್ಲಿ ಎಂಟು ವರ್ಷದ ಬಾಲಕ ಮಾತ್ರ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈಶಾನ್ಯ ಪ್ರಾಂತ್ಯದ ಲಿಂಪೊಪೊದ ಮಮಟ್ಲಕಲಾ ಬಳಿಯ ಸೇತುವೆಯ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಸಾರಿಗೆ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಪ್ರಯಾಣಿಕರ ಬಸ್ ದಕ್ಷಿಣ ಆಫ್ರಿಕಾದ ಭೂ-ಆವೃತ ದೇಶವಾದ ಬೋಟ್ಸ್ವಾನಾದಿಂದ ಲಿಂಪೊಪೊದ ಮೊರಿಯಾ ಎಂಬ ಪಟ್ಟಣಕ್ಕೆ ಜನರನ್ನು ಕರೆದೊಯ್ಯುತ್ತಿತ್ತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. “ರಕ್ಷಣಾ ಕಾರ್ಯಾಚರಣೆ ಗುರುವಾರ ಸಂಜೆಯವರೆಗೂ ಮುಂದುವರಿಯಿತು, ಕೆಲವು ಶವಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ, ಇತರರು ಅವಶೇಷಗಳ ಒಳಗೆ ಸಿಕ್ಕಿಬಿದ್ದು ಘಟನಾ ಸ್ಥಳದಲ್ಲಿ ಚದುರಿಹೋಗಿದ್ದಾರೆ” ಎಂದು ಲಿಂಪೊಪೊದ ಸಾರಿಗೆ ಇಲಾಖೆ ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದೆ.