ಬೆಂಗಳೂರು:ಬೆಂಗಳೂರು ಮೆಡಿಕಲ್ ಕಾಲೇಜಿನ ಬಿಎಂಸಿ ಹಾಸ್ಟೆಲ್ನಲ್ಲಿದ್ದ ಬೆಂಗಳೂರಲ್ಲಿ ಮೆಡಿಕಲ್ ಕಾಲೇಜು 47 ವಿದ್ಯಾರ್ಥಿನಿಯರು ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ನಡೆಯುತ್ತಿದೆ.ಕಾಲರಾ ಶಂಕೆ ಕೂಡ ವ್ಯಕ್ತವಾಗಿದೆ.ಅನಾರೋಗ್ಯಕ್ಕೆ ಕಾರಣವೇನು ಎಂಬುದರ ಬಗ್ಗೆ ಆರೋಗ್ಯ ಇಲಾಖೆ ತನಿಖೆ ನಡೆಸಲಿದೆ.
ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಉತ್ತಮವಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಆರ್ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ತಿಳಿಸಿದ್ದಾರೆ.
ಹೆಚ್ಚು ತಾಪಮಾನ ನಡುವೆ ಬೆಂಗಳೂರಿನಲ್ಲಿ ಕಾಲರಾ ಭೀತಿ ಶುರುವಾಗಿದೆ. ಇದರ ಮಧ್ಯೆ ಏಕಾಏಕಿ ಬೆಂಗಳೂರು ಮೆಡಿಕಲ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿನಿಯರು ಏಕಾಏಕಿ ವಾಂತಿ-ಭೇದಿಯಿಂದಾಗಿ ಅಸ್ವಸ್ಥಗೊಂಡಿದ್ದಾರೆ.