ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಹಾಗೂ ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಚಿಕ್ಕಜಾಲ ಠಾಣೆಯ ಪೊಲೀಸರು ಹಾಗೂ ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಹೌದು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆ ಪ್ರಿನ್ಸೆಸ್ ಎನ್ನುವವಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತಳ ಬಳಿ ಇಂದ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪೊಲೀಸರು ವಿದೇಶಿ ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.