ಚಿತ್ರದುರ್ಗ : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಟ್ಟಾಗಿ ಪಾಲಿಸುತ್ತಿದ್ದು ಇದೀಗ ಚಿತ್ರದುರ್ಗದಲ್ಲಿ ಚುನಾವಣಾ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದು ದಾಖಲೆ ಇಲ್ಲದೆ ಸಂಗ್ರಹಿಸಲಾಗಿದ್ದ ಸುಮಾರು ಐದು ಕೆಜಿ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ.
BREAKING: ಅರವಿಂದ್ ಕೇಜ್ರಿವಾಲ್‌ಗೆ ರಿಲೀಫ್: ಸಿಎಂ ಸ್ಥಾನದಿಂದ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ಕೋರ್ಟ್ ವಜಾ
ಹೌದು ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ದಾಖಲೆ ಇಲ್ಲದೇ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.ಖಚಿತ ಮಾಹಿತಿ ಮೇರೆಗೆ ಹಿರಿಯೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 5 ಕೆಜಿ 250 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
BREAKING : ಫೆಮಾ ಪ್ರಕರಣ: ಅರವಿಂದ್ ಕೇಜ್ರಿವಾಲ್ ಪತ್ನಿಯ ಸಂಬಂಧಿಯ ಮನೆ ಮೇಲೆ `ED’ ದಾಳಿ
ಇದು ದಾವಣಗೆರೆಯ ವರ್ಧಮಾನ ಜುವೆಲರಿಗೆ ಸೇರಿದ ಚಿನ್ನಾಭರಣ ಎಂದು ತಿಳಿದುಬಂದಿದೆ. ದಾಖಲೆ ಇಲ್ಲದ ಚಿನ್ನ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರಾಜೇಶ್ ಹಾಗೂ ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ಚಿನ್ನವನ್ನು ಜಪ್ತಿ ಮಾಡಲಾಗಿತ್ತು.ಈ ಸಂಬಂಧ ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.