ನವದೆಹಲಿ: ರಾಜಸ್ಥಾನದ ಸಿರೋಹಿ ಜಿಲ್ಲೆಯ ಪಿಂದ್ವಾರಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಜೀಪ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ಒಂದು ಡಜನ್ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಜೀಪ್ ತಪ್ಪು ದಿಕ್ಕಿನಲ್ಲಿ ಚಲಿಸಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ ಎಂದು ಎಸ್ ಪಿ ಸಿರೋಹಿ ಅನಿಲ್ ಕುಮಾರ್ ತಿಳಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ತಲುಪಿದ್ದು, ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ಹೇಳಿದರು