ಜೈಪುರ: ಜೈಪುರ ಬಳಿಯ ಬಸ್ಸಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಘೋರ ದುರಂತ ಸಂಭವಿಸಿದ್ದು, ಐವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬಸ್ಸಿಯ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಜೈಪುರ ಜಿಲ್ಲಾಧಿಕಾರಿ ಪ್ರಕಾಶ್ ರಾಜ್ ಪುರೋಹಿತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸುಟ್ಟ ಗಾಯಗಳೊಂದಿಗೆ ಇಬ್ಬರನ್ನು ಇಲ್ಲಿನ ಎಸ್ಎಂಎಸ್ ಆಸ್ಪತ್ರೆಗೆ ಕರೆತರಲಾಗಿದೆ. ಅವರಿಗೆ ಉತ್ತಮ ಚಿಕಿತ್ಸೆ ನೀಡಲು ವೈದ್ಯರು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದಾರೆ.
ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಕೂಡ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. “ಜೈಪುರ ಬಳಿಯ ಬಸ್ಸಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅಪಘಾತದಿಂದಾಗಿ ನಾಗರಿಕರ ಸಾವು ತುಂಬಾ ದುಃಖಕರವಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸ್ಥಳಕ್ಕೆ ತಲುಪಲು ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತವಾಗಿ ನಡೆಸಲು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸೂಚನೆ ನೀಡಲಾಗಿದೆ. ಘಟನೆಯ ನಂತರ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ಕಾರ್ಖಾನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಕಾರ್ಖಾನೆ ಮಾಲೀಕರು ಪರಾರಿಯಾಗಿದ್ದಾರೆ.