ನವದೆಹಲಿ: ಒಡಿಶಾದ ಜಜ್ಪುರ್ ಜಿಲ್ಲೆಯಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದ ಪರಿಣಾಮ ಮಹಿಳೆ ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುರಿಯಿಂದ ಕೋಲ್ಕತ್ತಾಗೆ 40 ಪ್ರಯಾಣಿಕರನ್ನು ಹೊತ್ತ ಬಸ್ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ -16 ರ ಬಾರಾಬತಿ ಸೇತುವೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಜೈಪುರದ ಪೊಲೀಸ್ ವರಿಷ್ಠಾಧಿಕಾರಿ, ವೈದ್ಯರ ತಂಡ ಮತ್ತು ಇತರ ಜಿಲ್ಲಾಡಳಿತದ ಅಧಿಕಾರಿಗಳು ಅಪಘಾತದ ಸ್ಥಳದಲ್ಲಿದ್ದಾರೆ.ಅಗ್ನಿಶಾಮಕ ಸಿಬ್ಬಂದಿ ಗ್ಯಾಸ್ ಕಟ್ಟರ್ ಬಳಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ 3 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

Share.
Exit mobile version