ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಐದು ಮಹಾನಗರ ಪಾಲಿಕೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ಈ ಕುರಿತು ಮಾಹಿತಿ ನೀಡಿದರು. ಈ ವರ್ಷದಲ್ಲೇ ಮೈಸೂರು ಶಿವಮೊಗ್ಗ ದಾವಣಗೆರೆ ತುಮಕೂರು ಹಾಗೂ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ರಾಜ್ಯ ಚುನಾವಣೆ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ಹೇಳಿಕೆ ನೀಡಿದರು. ಸರ್ಕಾರ ಮೀಸಲಾತಿ ಪಟ್ಟಿ ಕೊಡದಿದ್ದರೂ ಚುನಾವಣೆ ನಡೆಸೆ ನಡೆಸುತ್ತೇವೆ. ಹೈಕೋರ್ಟ್ ಗೆ ಹೋಗಿ ಹಳೆ ಮೀಸಲಾತಿಯಂತೆ ಚುನಾವಣೆ ಮಾಡುತ್ತೆವೆ. ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಐದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಸಿದ್ಧವಾಗಿದೆ.
ಮೈಸೂರು ಮಹಾನಗರ ಪಾಲಿಕೆ, ಶಿವಮೊಗ್ಗ, ದಾವಣಗೆರೆ, ತುಮಕೂರು ಹಾಗೂ ಮಂಗಳೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ನಡೆಸಿದ್ದೇವೆ. ರಾಜ್ಯ ಸರ್ಕಾರ ಅನಗತ್ಯವಾಗಿ ವಿಳಂಬ ಮಾಡುತ್ತಿದೆ ಅಂತ ಅನಿಸುವುದಿಲ್ಲ. ಸರ್ಕಾರಕ್ಕೆ ತನ್ನದೇ ಆದಂತಹ ಜವಾಬ್ದಾರಿ ಇರುತ್ತದೆ. ಯಾವುದೇ ವರ್ಗಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಮೈಸೂರಿನಲ್ಲಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್ ಸಂಗ್ರೇಶಿ ಈ ಕುರಿತು ಹೇಳಿಕೆ ನೀಡಿದರು.