ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಬಸ್ ಟ್ರಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮೃತರು ವಾರ್ಕರಿಗಳು (ವಿಠ್ಠಲನ ಭಕ್ತರು) ಆಗಿದ್ದು, ಆಷಾಢ ಏಕಾದಶಿ ಆಚರಣೆಗಾಗಿ ಮುಂಬೈ ಬಳಿಯ ತಮ್ಮ ಊರಾದ ಡೊಂಬಿವ್ಲಿಯಿಂದ ಪಂಢರಪುರಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಬಸ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ಕಮರಿಗೆ ಬಿದ್ದಿದೆ.
ಡೊಂಬಿವ್ಲಿಯಿಂದ ಒಟ್ಟು 42 ಪ್ರಯಾಣಿಕರು ಪಂಢರಪುರಕ್ಕೆ ತೆರಳುತ್ತಿದ್ದಾಗ ಅಡ್ನೆ ಗ್ರಾಮದ ಬಳಿ ಬಸ್ ಟ್ರಾಕ್ಟರ್ಗೆ ಡಿಕ್ಕಿ ಹೊಡೆದಿದೆ ಎಂದು ಡಿಸಿಪಿ ವಿವೇಕ್ ಪನ್ಸಾರೆ ಸುದ್ದಿಗಾರರಿಗೆ ತಿಳಿಸಿದರು. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದರು. ನವೀ ಮುಂಬೈ ಡಿಸಿಪಿ ವಿವೇಕ್ ಪನ್ಸಾರೆ ಮಾತನಾಡಿ, “ಆಷಾಢ ಏಕಾದಶಿ ಸಂದರ್ಭದಲ್ಲಿ ಜನರು ಖಾಸಗಿ ಬಸ್ ಮೂಲಕ ಪಂಢರಪುರಕ್ಕೆ ತೆರಳುತ್ತಿದ್ದರು. ಬಸ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಗಾಯಗೊಂಡ 42 ಜನರನ್ನು ಎಂಜಿಎಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮೂವರನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. 5 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ