ಕಲಬುರಗಿ : ಕಲಬುರ್ಗಿಯಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಲಾರಿಯೊಂದು ಬಾಲಕ ಮೇಲೆ ಹರಿದು ಸ್ಥಳದಲ್ಲೇ 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಲಬುರ್ಗಿಯ ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಅಲೂರ(ಬಿ) ಗ್ರಾಮದ ಕೂಲಿ ಕಾರ್ಮಿಕನ ಮಗು ಅಯ್ಯಪ್ಪ ಬಸವರಾಜ (5) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಕೆಂಪು ಮಣ್ಣು ತುಂಬಿಕೊಂಡು ರಾಜಶ್ರೀ ಸಿಮೆಂಟ್ ಕಾರ್ಖಾನೆ ಒಳಗಡೆ ತೆರಳುತ್ತಿದ್ದ ಖಾಸಗಿ ಲಾರಿಯೊಂದು ಬಾಲಕನ ಮೇಲೆ ಹರಿದು ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಚಿತ್ತಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸುತ್ತಿದ್ದಾರೆ.