ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ ಸಂಭವಿಸಿದ್ದು, ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ನೀಡಗುಂಡಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ಮನೆಯಿಂದ ಅಂಗನವಾಡಿಗೆ ಹೋಗುತ್ತಿದ್ದ ವೇಳೆ ಶಾಲಾ ಬಸ್ ಹರಿದು ಗ್ರಾಮದ 5 ವರ್ಷದ ಬಾಲಕ ಬಸವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಪಘಾತದ ಬಳಿಕ ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.