ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಬಿಹಾರ ಮೂಲದ ವ್ಯಕ್ತಿಯೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಸದ್ಯ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬಿಹಾರ್ ಮೂಲದ ವ್ಯಕ್ತಿಯಿಂದ ಈ ಒಂದು ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದ್ದು, ಘಟನೆ ಖಂಡಿಸಿ ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಮನೆಯ ಹೊರಗಡೆ ಬಾಲಕಿ ಆಟವಾಡುತ್ತಿರುತ್ತಿದ್ದಾಳೆ ಈ ವೇಳೆ ಪಾಪಿ ಬಾಲಕಿಗೆ ಚಾಕ್ಲೇಟ್ ಆಸೆ ತೋರಿಸಿ ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.