ಚಿಕ್ಕಮಗಳೂರು : ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದೀಗ ಚಿಕ್ಕಮಂಗಳೂರಿನಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಹೌದು 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ದುರುಳರು ಬಾಲಕಿಯ ಮೃತದೇಹ ಬೆಡ್ ಶೀಟ್ ನಲ್ಲಿ ಸುತ್ತಿಟ್ಟು ಹೋಗಿದ್ದಾರೆ. ಬಾಲಕಿ ಒಬ್ಬಳೇ ಇದ್ದಾಗ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದಾರೆ.
ಜ್ವರ ಹಿನ್ನೆಲೆಯಲ್ಲಿ ಅಂಗನವಾಡಿಗೆ ಹೋಗದೆ ಮನೆಯಲ್ಲಿ ಬಾಲಕಿ ಇದ್ದಳು. ತಾಯಿ ಜಮೀನು ಕೆಲಸ ಮುಗಿಸಿ ಮನೆಗೆ ಬಂದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಅಜ್ಜಂಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.